ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ – ಬಾಲಕ ಸಹಿತ ಮೂವರು ಅರೆಸ್ಟ್

ಬೆಳ್ತಂಗಡಿ : ಅಪ್ರಾಪ್ತೆಯ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕ ಸಹಿತ ಮೂವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಮೂವರ ಮೇಲೆಯೂ ಬೆಳ್ತಂಗಡಿ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಹಾಗೂ ಪೊಕ್ಸೊ ಪ್ರಕರಣ ದಾಖಲಾಗಿದೆ.

ಮೂಡುಬಿದಿರೆ ನಿವಾಸಿಗಳಾದ ಮಹಮ್ಮದ್ ಇಕ್ಸಾಲ್(26) ಫಾರೂಕ್(19) ಹಾಗೂ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಜೂ. 1ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ. ಅಪ್ರಾಪ್ತನನ್ನು ಮಂಗಳೂರು ಬಾಲ ನ್ಯಾಯಾಲಕ್ಕೆ ಹಾಜರುಪಡಿಸಿದ್ದು, ಮಂಗಳೂರು ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳ್ತಂಗಡಿಯ ಈ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಸೇರಿ ಒತ್ತಾಯಪೂರ್ವಕವಾಗಿ ಅತ್ಯಾಚಾರವೆಸಗಿದ್ದರು‌. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಂತ್ರಸ್ತೆ ಮೇ 31ರಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಆಗಮಿಸಿ ದೂರು ನೀಡಿದ್ದಾಳೆ. ದೂರಿನನ್ವಯ ಓರ್ವ ಅಪ್ರಾಪ್ತ ಸೇರಿ ಮೂವರ ವಿರುದ್ಧ ಗ್ಯಾಂಗ್‌ ರೇಪ್ ಮತ್ತು ಪೊಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ