ಗ್ಯಾಂಗ್‌ವಾರ್ ಆರೋಪಿಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು – ಮಾಜಿ ಶಾಸಕ ರಘುಪತಿ ಭಟ್

ಉಡುಪಿ : ಮಣಿಪಾಲ-ಉಡುಪಿ ರಸ್ತೆಯಲ್ಲಿ ರಾತ್ರಿಯಲ್ಲಿ ರಾಜಾರೋಷವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ ಎನ್ನಲಾದ ಘಟನೆ ತುಂಬಾ ಆತಂಕಕಾರಿಯಾಗಿದೆ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ.

ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ರಸ್ತೆ ಮದ್ಯೆ ಕಾದಾಡಿದ್ದಾರೆ ಎಂದರೆ ಕ್ರಿಮಿನಲ್‌ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಸಾಕ್ಷಿಯಾಗಿದೆ. ಪ್ರಜ್ಞಾವಂತ ನಾಗರಿಕ ಸಮಾಜದ ಉಡುಪಿಯಲ್ಲಿ ಇಂತಹ ದುಷ್ಕೃತ್ಯಗಳು ನಡೆಯುತ್ತದೆ ಎಂದರೆ ಇದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಇದು ಮುಂದಿನ ದಿನಗಳಲ್ಲಿ ಕೋಮು ಸಂಘರ್ಷಕ್ಕೂ ಎಡೆಮಾಡಿಕೊಡಬಹುದು.

ಆದ್ದರಿಂದ ಪೊಲೀಸ್ ಇಲಾಖೆ ಯಾವುದೇ ಪ್ರಭಾವಕ್ಕೆ ಒಳಗಾಗದೆ ಇದರ ಹಿಂದಿರುವ ಎಲ್ಲಾ ದುಷ್ಕರ್ಮಿಗಳ ಹೆಡೆಮುರಿಕಟ್ಟಿ ಕಠಿಣವಾದ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !