ಗ್ಯಾಂಗ್‌ವಾರ್ ಪ್ರಕರಣದಲ್ಲಿ ಮಾದಕ ದ್ರವ್ಯಗಳ ಬಳಕೆ‌ಯಾಗಿರುವ ಶಂಕೆ; ಮಣಿಪಾಲದಲ್ಲಿ ತಡರಾತ್ರಿ ಪೊಲೀಸ್ ಕಾರ್ಯಾಚರಣೆ

ಮಣಿಪಾಲ : ಉಡುಪಿಯ ಕುಂಜಿಬೆಟ್ಟಿನಲ್ಲಿ ನಡೆದ ಗ್ಯಾಂಗ್‌ವಾರ್ ಪ್ರಕರಣದ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ತಡರಾತ್ರಿ ಪೊಲೀಸ್ ಕಾರ್ಯಾಚರಣೆ ನಡೆದಿದೆ. ಈ ಗ್ಯಾಂಗ್‌ವಾರ್ ಪ್ರಕರಣದಲ್ಲಿ ಮಾದಕ ದ್ರವ್ಯಗಳ ಬಳಕೆ‌ಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ಇರುವ ಪಬ್ ಮತ್ತು ಬಾರ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

https://www.instagram.com/reel/C7rEjwmBkTt/?utm_source=ig_web_copy_link&igsh=MzRlODBiNWFlZA==

ಮಣಿಪಾಲ ಪೊಲೀಸರು ತಡರಾತ್ರಿ ಅವಧಿಗೂ ಮೀರಿ ಕಾರ್ಯಾಚರಿಸುತ್ತಿದ್ದ ಪಬ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಚಟುವಟಿಕೆಗಳು ಮತ್ತು ಮಾದಕ ದ್ರವ್ಯಗಳ ಸೇವನೆಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಲಾಗಿದೆ.

“ಜಿಲ್ಲೆಯಲ್ಲಿ ಯಾವುದೇ ರೀತಿಯ ಕ್ರಿಮಿನಲ್ ಚಟುವಟಿಕೆಗಳಿಗೆ ಅವಕಾಶ ನೀಡಬಾರದು” ಎಂಬ ಉದ್ದೇಶದಿಂದ ಕಾರ್ಯಾಚರಣೆ ನಡೆದಿದೆ. ತಡ ರಾತ್ರಿ ವಿನಾ ಕಾರಣ ಅಲೆದಾಡುವವರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಮಣಿಪಾಲ ಸರ್ಕಲ್ ಇನ್ಸ್‌ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !