ತಂಬಾಕು ಮುಕ್ತ ಅಪಾರ್ಟ್‌ಮೆಂಟ್‌ಗೆ ಜಿಲ್ಲಾಧಿಕಾರಿಯಿಂದ ಪ್ರಮಾಣಪತ್ರ ವಿತರಣೆ

ಉಡುಪಿ : ನಗರದ ಸ್ವಸ್ತಿಕ್ ಎನ್‌ಕ್ಲೇವ್ ಅಪಾರ್ಟ್‌ಮೆಂಟ್‌ನ್ನು ‘ತಂಬಾಕು ಮುಕ್ತ ಅಪಾರ್ಟ್‌ಮೆಂಟ್’ ಎಂದು ಜಿಲ್ಲಾಡಳಿತ ಗುರುತಿಸಿದ್ದು, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರು ಇಂದು ಅಜ್ಜರಕಾಡಿನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ ಸಂಬಂಧಿತರಿಗೆ ಮೆಚ್ಚುಗೆ ಪ್ರಮಾಣ ಪತ್ರ (ಅಪ್ರಿಸಿಯೇಷನ್ ಸರ್ಟಿಫಿಕೇಟ್)ವನ್ನು ವಿತರಿಸಿದರು.
ನಗರದಲ್ಲಿ ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತದ ಜಾಥಾ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಈ ಸಂದರ್ಭದಲ್ಲಿ ತಂಬಾಕಿನ ಬಳಕೆಯನ್ನು ಜನರಿಂದ ದೂರ ಮಾಡುವ ನಿಟ್ಟಿನಲ್ಲಿ ತಂಬಾಕಿನಿಂದ ದೂರವಿರುವ ಸ್ವಸ್ತಿಕ್ ಎನ್‌ಕ್ಲೇವ್ ಅಪಾರ್ಟ್‌ಮೆಂಟ್‌ಗೆ ಮೆಚ್ಚುಗೆ ಪತ್ರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ ಮತ್ತಿತರರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ