ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ಉಡುಪಿ : ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿಯನ್ನು ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾತನಾಡಿ, ಸುದೀರ್ಘ 27 ವರ್ಷಗಳ ಬಳಿಕ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೊದಲ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ ಮಹಿಳಾ ಶಾಸಕಿ ರೇಖಾ ಗುಪ್ತಾ ಅವರನ್ನು ರಾಷ್ಟ್ರ ರಾಜಧಾನಿಯ ಗದ್ದುಗೆಗೆ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ದೆಹಲಿಯ ಮುಖ್ಯಮಂತ್ರಿ ಗಾದಿಗೆ ಅನೇಕ ಮಂದಿ ಘಟಾನುಘಟಿ ಶಾಸಕರು ಸಮರ್ಥರಾಗಿದ್ದರೂ, ಪಕ್ಷದ ಓರ್ವ ನೂತನ ಮಹಿಳಾ ಶಾಸಕಿಗೆ ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಹಿಡಿಯುವ ಅವಕಾಶವನ್ನು ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ಪ್ರಮುಖರಿಗೆ ಅಭಿನಂದನೆಗಳು ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಜಾಲಾ ಸತೀಶ್, ತಾರಾ ಆಚಾರ್ಯ, ವಿದ್ಯಾ ಶ್ಯಾಮ್, ಸುಮಾ ಆರ್. ಕುಮಾರ್, ಲೀಲಾ ಆರ್. ಆಮೀನ್, ಕವಿತಾ ಪೂಜಾರಿ, ಲೀನಾ, ಉಡುಪಿ ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಧಾ ಪೈ, ಯಶೋಧಾ ರಾಜೇಂದ್ರ, ಸರೋಜಾ ಶೆಣೈ, ಆಶಲತಾ ಹೆಗ್ಡೆ, ದೀಪಾ ಪೈ, ಪ್ರಜ್ಞಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್