ಬಂಡಾಯ ಅಭ್ಯರ್ಥಿ ಮಾಜಿ ಶಾಸಕ ರಘುಪತಿ ಭಟ್ ಪಕ್ಷದಿಂದ ಉಚ್ಚಾಟನೆ

ಉಡುಪಿ : ವಿಧಾನಪರಿಷತ್‌ ಚುನಾವಣೆಯಲ್ಲಿ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

“ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್‌ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದುದರಿಂದ, ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ” ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ಆದೇಶ ಹೊರಡಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ