ಮಾಹೆ ವಿವಿ ಕ್ರೀಡಾಕೂಟ : ಎಂಐಟಿ ಚಾಂಪಿಯನ್

ಮಣಿಪಾಲ : ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ 2023-24ನೇ ಸಾಲಿನ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು.

ಮಾಹೆಯ ಕೌನ್ಸೆಲಿಂಗ್ ಸಭಾಂಗಣದಲ್ಲಿ ನಡೆದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಎಂಐಟಿಯ ನಿರ್ದೇಶಕ ಕಮಾಂಡರ್ ಡಾ.ಅನಿಲ್ ರಾಣಾ ಅವರು ಸಮಗ್ರ ಚಾಂಪಿಯನ್‌ ಟ್ರೋಫಿಯನ್ನು ಸಮಾರಂಭದ ಮುಖ್ಯ ಅತಿಥಿಗಳಿಂದ ಸ್ವೀಕರಿಸಿದರು. ಎಂಐಟಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಉಪೇಂದ್ರ ನಾಯಕ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಹೆಯ ಕ್ರೀಡಾ ಮಂಡಳಿ ಸ್ಪೋರ್ಟ್ಸ್ ಕೌನ್ಸಿಲ್‌ ಈ ಕ್ರೀಡೋತ್ಸವವನ್ನು ಹಮ್ಮಿಕೊಂಡಿದ್ದು ಮಾಹೆ ವ್ಯಾಪ್ತಿಯ ಎಲ್ಲಾ ಕಾಲೇಜುಗಳ ಬೋಧಕರು ಮತ್ತು ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಮಾಹೆಯ ಸಹಕುಲಾಧಿಕಪತಿ ಡಾ. ಎಚ್.ಎಸ್. ಬಲ್ಲಾಳ್, ಉಪಕುಲಪತಿ ಲೆ.ಜ. ಡಾ.ಎಂ.ಡಿ. ವೆಂಕಟೇಶ್ ಮತ್ತು ಸಹ- ಉಪಕುಲಪತಿಗಳು, ವಿವಿಧ ಘಟಕಗಳ ಮುಖ್ಯಸ್ಥರು, ವಿಭಾಗ ಮುಖ್ಯಸ್ಥರು, ಅಧಿಕಾರಿಗಳು ಭಾಗವಹಿಸಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ