ವಿಶ್ವ ತಂಬಾಕುರಹಿತ ದಿನದ ಅಂಗವಾಗಿ ಮಣಿಪಾಲದಲ್ಲಿ ಕಲಾಕೃತಿ ಅನಾವರಣ

ಮಣಿಪಾಲ : ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ರಚಿಸಿದ ಕಲಾ‌ಕೃತಿಯನ್ನು ಕೆಎಂಸಿ ಅಸೋಸಿಯೆಟ್ ಡೀನ್ ಡಾ| ಕೃಷ್ಣಾನಂದ ಪ್ರಭು ಮತ್ತು ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ। ಅಶ್ವಿನಿ ಕುಮಾ‌ರ್ ಅನಾವರಣಗೊಳಿಸಿದರು.

ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ. ಮುರಳೀಧರ್ ಕುಲಕರ್ಣಿ, ಕಲಾವಿದ ಶ್ರೀನಾಥ್ ಮಣಿಪಾಲ್ ಮತ್ತು ರವಿ ಹಿರೇಬೆಟ್ಟು ರಚಿಸಿದ ತಂಬಾಕು ಜಾಗೃತಿ ಕಲಾಕೃತಿ ಬಗ್ಗೆ ವಿವರಿಸಿದರು.

ಸಮುದಾಯ ವೈದ್ಯಕೀಯ ವಿಭಾಗದ ಡಾ| ವೀಣಾ ಕಾಮತ್, ಡಾ। ಚೈತ್ರಾ ರಾವ್, ಡಾ। ಸ್ನೇಹಾ ಕಾಮತ್, ಡಾ। ಈಶ್ವರಿ, ಡಾ| ಯಶ್, ಡಾ। ಅಖಿಲಾ, ಡಾ| ಮಂಜುಳಾ, ಡಾ| ಅರುಣ್‌ ದಾಸ್, ಸಮುದಾಯ ವೈದ್ಯಕೀಯ ವಿಭಾಗದ ಬೋಧಕೇತರ ಸಿಬಂದಿ, ಸ್ನಾತಕೋತ್ತರ ಹಾಗೂ ಪ.ಪೂ ವೈದ್ಯಕೀಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ