ಉಡುಪಿ : ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್‌ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ. ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಉಡುಪಿಯ ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.
ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್‌ನಲ್ಲಿ ಶೇ. 4 ರಿಂದ 5ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್‌ನಲ್ಲಿ ಶೇ. 15ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ. ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ದೇಶಾಭಿಮಾನ ಮೂಡಿಸುವ ವಿವಿಧ ನೃತ್ಯ ಕಾರ್ಯಕ್ರಮಗಳು ಗಮನ ಸೆಳೆದವು. ಈ ವೇಳೆ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರಿಗೆ ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.