ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ! ಗಮನ ಸೆಳೆದ ಕಸಾಪ ಅಭಿಯಾನ

ಉಡುಪಿ : ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿರುವ ಮನೆಯೇ ಗ್ರಂಥಾಲಯ ಅಭಿಯಾನ ಗಮನ ಸೆಳೆದಿದೆ. ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ ಆರಂಭಿಸಲಾಗಿದೆ. ಪ್ರತಿ ಮನೆಯಲ್ಲೂ ಓದುಗರನ್ನು ಸೃಷ್ಟಿಸುವ ದೃಷ್ಟಿಯಿಂದ ಸಾಹಿತ್ಯ ಪರಿಷತ್ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ನೂತನ ಗ್ರಂಥಾಲಯ ಆರಂಭಿಸಿದ ಬಳಿಕ ಮಾತನಾಡಿದ ಡಿಸಿ ಡಾ.ವಿದ್ಯಾ ಕುಮಾರಿ, ಡಿಜಿಟಲ್​ ಮಾಧ್ಯಮಗಳಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಇಳಿಮುಖವಾಗುತ್ತಿದೆ. ಕೈಯಲ್ಲಿ ಪುಸ್ತಕ ಹಿಡಿದು ಓದುವಾಗ ಲಭಿಸುವ ಸಂತಸ ಮೊಬೈಲ್​ ನೋಡಿ ಓದುವಾಗ ಲಭಿಸದು. ಯುವ ಸಮುದಾಯ ಸೇರಿದಂತೆ ಎಲ್ಲ ವಯೋಮಾನದವರೂ ಸಹ ಪುಸ್ತಕ ಓದುವ ಮೂಲಕ ಸಂಸ್ಕೃತಿ ಮುಂದುವರಿಸಬೇಕು ಎಂದರು. ಮುಂದಿನ ದಿನಗಳಲ್ಲಿ ಗ್ರಂಥಾಲಯಕ್ಕಾಗಿಯೇ ಒಂದು ಕೊಠಡಿ ಮೀಸಲಿಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಡಿಸಿ ಕಚೇರಿಯ ಗ್ರಂಥಾಲಯಕ್ಕಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿ, ಶುಭ ಕೋರಿದರು. ಅನೇಕ ಸಾಹಿತಿಗಳು ಗ್ರಂಥಾಲಯಕ್ಕೆ ತಮ್ಮ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !