₹1 ಕೋಟಿ ವೆಚ್ಚದ ಮಂಚಿ ಕೊರಗ ಕಾಲನಿ ಸಮುದಾಯ ಭವನಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಶಿಲಾನ್ಯಾಸ

ಉಡುಪಿ : ಉಡುಪಿ ನಗರಸಭೆಯ ಇಂದ್ರಾಳಿ ವಾರ್ಡಿನ ಮಂಚಿ ಕೊರಗ ಕಾಲನಿಯಲ್ಲಿ ಉಡುಪಿ ನಗರಸಭೆಯ ನಗರೋತ್ಥಾನ ಯೋಜನೆಯಡಿ ₹ 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್‌‌ಪಾಲ್ ಸುವರ್ಣ ಕೊರಗ ಸಮುದಾಯದ ಆಶೋತ್ತರಗಳ ಈಡೇರಿಕೆಗೆ ವಿಶೇಷ ಆದ್ಯತೆ ನೀಡುವ ನಿಟ್ಟಿನಲ್ಲಿ ಸುಸಜ್ಜಿತ ಸಮುದಾಯ ಭವನಕ್ಕೆ 1 ಕೋಟಿ ಅನುದಾನ ಮಂಜೂರು ಮಾಡಿ ಶಿಲಾನ್ಯಾಸ ನೆರವೇರಿಸಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಂಡು ಸಮುದಾಯದ ಆಭಿವೃದ್ಧಿ ಪರ ಕಾರ್ಯಕ್ರಮಗಳಿಗೆ ಈ ಸಮುದಾಯ ಭವನ ಸದುಪಯೋಗವಾಗಲಿ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ನಗರಸಭಾ ಸದಸ್ಯರಾದ ಶ್ರೀ ಅಶೋಕ್ ನಾಯ್ಕ್, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀಮತಿ ಸುಮಿತ್ರಾ ನಾಯಕ್, ಶ್ರೀ ಗಿರಿಧರ ಆಚಾರ್ಯ, ಶ್ರೀ ಹರೀಶ್ ಶೆಟ್ಟಿ, ಶ್ರೀಮತಿ ಕಲ್ಪನಾ ಸುಧಾಮ, ಪಕ್ಷದ ಪ್ರಮುಖರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ