ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ-ಆರೋಪಿಗೆ 20 ವರ್ಷಗಳ ಕಠಿನ ಶಿಕ್ಷೆ

ಉಡುಪಿ : ಬೈಂದೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2023ರ ಜುಲೈ ತಿಂಗಳಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೋಕ್ಸೋ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20ವರ್ಷಗಳ ಕಠಿನ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ

ಬೈಂದೂರು ನಿವಾಸಿ ಮಧುಕರ ಮರಾಠಿ (24) ಶಿಕ್ಷೆಗೆ ಗುರಿಯಾದ ಆರೋಪಿ. ನೊಂದ ಬಾಲಕಿಯು ಆರೋಪಿಯ ಸಂಬಂಧಿಕಳಾಗಿದ್ದು, ತನ್ನ ಮನೆಗೆ ಬಂದ ನೊಂದ ಬಾಲಕಿಯನ್ನು ಮಧುಕರ ಮರಾಠಿ ಬೆದರಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಈ ವಿಚಾರ ಬೇರೆಯವರಲ್ಲಿ ಹೇಳಿದರೆ ನಿನ್ನ ಬಗ್ಗೆ ಅಪ್ರಚಾರ ಮಾಡುವುದಾಗಿ ಆತ ಬಾಲಕಿಗೆ ಬೆದರಿಕೆಯೊಡ್ಡಿದ್ದ.

ಅನಂತರ ಮಧುಕರ, ಯಾರು ಇಲ್ಲದ ಸಮಯ ಆಕೆಯ ಮನೆಗೆ ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ವಿಚಾರ ಯಾರಲ್ಲಿಯೂ ಹೇಳದಂತೆ ಬೆದರಿಕೆಯೊಡ್ಡಿದ್ದನು ಎಂದು ದೂರಲಾಗಿದೆ. ಅನಂತರ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಮನೆಯವರು ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಆಕೆ ಗರ್ಭವತಿಯಾಗಿರುವ ಬಗ್ಗೆ ತಿಳಿದುಬಂತು.

ಈ ಬಗ್ಗೆ ವೈದ್ಯರು ಪೊಲೀಸ್‌ ಠಾಣೆಗೆ ಸೂಕ್ತ ಕ್ರಮಕ್ಕಾಗಿ ಮಾಹಿತಿ ನೀಡಿದ್ದರು. ಅದರಂತೆ ವಿಚಾರ ತಿಳಿದುಕೊಂಡ ಬಾಲಕಿಯ ತಾಯಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದರು. ಈ ಬಗ್ಗೆ ತನಿಖೆ ನಡೆಸಿದ ಬೈಂದೂರು ಪೊಲೀಸ್‌ ವೃತ್ತ ನಿರೀಕ್ಷಕ ಸವಿತೃ ತೇಜ್‌ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ