ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಮಹಿಳೆಗೆ 21ಲಕ್ಷ ರೂ. ವಂಚನೆ!

ಉಡುಪಿ : ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆರ್ಗದ ದೀಪಾಶ್ರೀ(29) ಎಂಬವರ ಮೊಬೈಲ್‌ಗೆ ಮೇ 29ರಂದು ಅಪರಿಚಿತ ವ್ಯಕ್ತಿಗಳು ಟ್ರೆಲಿಗ್ರಾಮ್ ಆ್ಯಪ್‌ನಲ್ಲಿ ಹೂಡಿಕೆಯ ಬಗ್ಗೆ ಮಾಹಿತಿ ಕಳುಹಿಸಿದ್ದು, ಬಳಿಕ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಹಣವನ್ನು ಹೂಡಿಕೆ ಮಾಡಲು ತಿಳಿಸಿದ್ದರು. ಅದನ್ನು ನಂಬಿದ ಅವರು ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 21,30,200ರೂ. ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿದ್ದರು. ಆದರೆ ಆರೋಪಿಗಳು ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನಾಗಲಿ ಈವರೆಗೆ ನೀಡದೇ ನಂಬಿಸಿ, ಮೋಸ ಮಾಡಿರುವುದಾಗಿ ದೂರಲಾಗಿದೆ.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!