ಕಳವಾದ 27 ಮೊಬೈಲ್ ವಾರಸುದಾರರಿಗೆ ಹಸ್ತಾಂತರ

ಉಡುಪಿ : ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವಾದ ಮೊಬೈಲ್ ಫೋನ್‌ಗಳನ್ನು ಪೊಲೀಸರು ಅವುಗಳ ವಾರಸುದಾರರಿಗೆ ಹಸ್ತಾಂತರಿಸಿದರು.
ಒಟ್ಟು 4,22,689 ರೂ.ಮೌಲ್ಯದ ವಿವಿಧ ಕಂಪೆನಿಯ 27 ಮೊಬೈಲ್‌ಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿದ್ದರು.

ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ.ಸಿದ್ದಲಿಂಗಪ್ಪ ಹಾಗೂ ಪರಮೇಶ್ವರ ಹೆಗಡೆ ಮತ್ತು ಉಡುಪಿ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ.ನೇತೃತ್ವದಲ್ಲಿ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿತ್ತು.

ಕೆಎಸ್‌ಪಿ ಆ್ಯಪ್ ಮೂಲಕ ಮೊಬೈಲ್ ಕಳವಾದ ದೂರುಗಳು ಬಂದಿದ್ದು, ಅನಂತರ ಆ ಮೊಬೈಲ್‌ಗಳನ್ನು ಸಿಎಸ್‌ಆರ್ ಪೋರ್ಟಲ್ ಆಪ್ಲಿಕೇಶನ್ ಅಡಿಯನ್ನು ಬ್ಲಾಕ್ ಮಾಡಿ 2025ನೇ ಸಾಲಿನಲ್ಲಿ 32 ಮೊಬೈಲ್‌ಗಳನ್ನು ಪತ್ತೆೆಹಚ್ಚಲಾಗಿತ್ತು. ಈ ಪೈಕಿ ಸುಮಾರು 5 ಮೊಬೈಲ್‌ಗಳನ್ನು ಈಗಾಗಲೇ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಡಿವೈಎಸ್‌ಪಿ ಪ್ರಭು ಡಿ.ಟಿ. ಮಾಹಿತಿ ನೀಡಿದರು.

Related posts

ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕೋಟದಲ್ಲಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು