43 ದಿನದ ಹಸುಗೂಸು ಮೃತ್ಯು

ಕುಂದಾಪುರ : 43 ದಿನದ ಹಸುಗೂಸು ತಾಯಿ ಎದೆ ಹಾಲು ಕುಡಿದು ಕೆಲವೇ ಹೊತ್ತಿನಲ್ಲಿ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗುಜ್ಜಾಡಿ ಗ್ರಾಮದ ಲಕ್ಷ್ಮಣ ಎಂಬುವರ ಪುತ್ರಿ ನೇತ್ರಾವತಿ ಎಂಬುವರ ಹಸುಗೂಸು ಮೃತಪಟ್ಟಿದೆ.

ತಾಯಿ ಮಂಗಳವಾರ ಬೆಳಿಗ್ಗೆ ಎಂಟು ಗಂಟೆಯ ಸುಮಾರಿಗೆ ಎದೆಹಾಲು ಕುಡಿಸಿ ರೂಮಿನಿಂದ ಹೊರಗೆ ಬಂದಾಗ ಅಜ್ಜ ಲಕ್ಷ್ಮಣ ಮಗುವನ್ನು ನೋಡಲು ಒಳಗೆ ಹೋಗಿದ್ದಾರೆ. ಆಗ ಮಗು ಉಸಿರಾಡದೇ ಇರುವುದನ್ನು ಗಮನಿಸಿದಾಗ ಮಗುವಿನ ಮೈ ಕೂಡ ತಣ್ಣಗಾಗಿದ್ದು ಕೂಡಲೇ ಮಗುವನ್ನು ಕರೆದುಕೊಂಡು ಕುಂದಾಪುರದ ವಿನಯ ಆಸ್ಪತ್ರೆಗೆ ಕರೆದುಕೊಂಡು ಹೋಗಿರುತ್ತಾರೆ.

ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು ಮಗು ಅದಾಗಲೇ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ. ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ