ಕಡಲ್ಕೊರೆತ ತಡೆಗೆ ಕರಾವಳಿ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ

ಉಡುಪಿ : ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಕಡಲ್ಕೊರೆತ ವಿಚಾರಕ್ಕೆ ಸಂಬಂಧಿಸಿ ಹಿಂದಿನ 10 ಕೋಟಿ ರೂ. ಬಿಲ್ ಬಾಕಿ ಇದೆ. ಅದನ್ನೂ ಬಿಡುಗಡೆ ಮಾಡಲಾಗುತ್ತದೆ. ಕಡಲ್ಕೊರೆತ ಶಾಶ್ವತ ಪರಿಹಾರಕ್ಕೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರಕಾರದಿಂದ ಮಾತ್ರ ಪರಿಹಾರ ನೀಡುವುದು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕಾಗಿದೆ ಎಂದರು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ