ಬಿಜೆಪಿ ಪಾದಯಾತ್ರೆಯಲ್ಲಿ ಮಂಗಳೂರಿನ 5ಸಾವಿರ ಕಾರ್ಯಕರ್ತರು ಭಾಗಿ – ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ

ಮಂಗಳೂರು : ರಾಜ್ಯ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ಆ.3ರಿಂದ 10ರವರೆಗೆ ನಡೆಯುವ ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ದ.ಕ.ಜಿಲ್ಲೆಯ ಸುಮಾರು 5ಸಾವಿರ ಕಾರ್ಯಕರ್ತರು ಭಾಗಿಯಾಗಲಿದ್ದಾರೆ‌ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.

ನಗರದ ಕೊಡಿಯಾಲಬೈಲ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ವಿವಿಧ ದಿನಗಳಲ್ಲಿ, ವಿವಿಧ ಮೋರ್ಚಾದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ವ್ಯವಸ್ಥೆಗಾಗಿ ದ.ಕ.ಜಿಲ್ಲಾ ಯುವಮೋರ್ಚದ 200ರಷ್ಟು ಕಾರ್ಯಕರ್ತರು ಇಂದೇ ಬೆಂಗಳೂರಿಗೆ ತೆರಳಿದ್ದಾರೆ ಎಂದರು.

ನಾನು ಸೇರಿದಂತೆ ಎಂಎಲ್ಎ, ಮಾಜಿ ಶಾಸಕರುಗಳು, ಬಿಜೆಪಿಯ ಉನ್ನತಮಟ್ಟದ ನಾಯಕರುಗಳು ಈ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದ ನಾಯಕರ ಸೂಚನೆಯ ಮೇರೆಗೆ ಆ.8ರಂದು ದ.ಕ.ಜಿಲ್ಲೆಯ ಸುಮಾರು ಮೂರು ಸಾವಿರದಷ್ಟು ಕಾರ್ಯಕರ್ತರು ಒಂದೇ ದಿನ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಸಿಂಧೂರ್ ಕಾರ್ಯಾಚರಣೆ ಯಶಸ್ವಿ – ಶಾಸಕರ ನೇತೃತ್ವದಲ್ಲಿ ವಿಶೇಷ ಪೂಜೆ

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್