ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಗೆ 6ನೇ ಗ್ಯಾರಂಟಿ : ಬಡವರ ಬಿಪಿಎಲ್‌ ಪಡಿತರ ಚೀಟಿ ರದ್ಧತಿ ಭಾಗ್ಯ : ಶಾಸಕ ವಿ ಸುನಿಲ್‌ ಕುಮಾರ್‌

ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯನವರ ಸರಕಾರ ದಿವಾಳಿಯಾಗಿದ್ದು, ತನ್ನ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರಾಜ್ಯದ ಆರ್ಥಿಕತೆ ಅದೋಗತಿಗೆ ಇಳಿದಿದೆ. ಇದನ್ನು ಸರಿಪಡಿಸಲು ಸಾಧ್ಯವಾಗದೇ ಇದೀಗ ಸರಕಾರವು ಬಡವರ ಬಿಪಿಎಲ್ ಪಡಿತರ ಚೀಟಿ ರದ್ದಿಗೆ ಮುಂದಾಗಿದೆ. ಕಾಂಗ್ರೆಸ್ ಸರಕಾರ ಈ ಮೂಲಕ ಆರನೇ ಭಾಗ್ಯ ನೀಡಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ ಕಿಡಿಕಾರಿದರು.

ಅವರು ಅ. 2ರಂದು ಕಾರ್ಕಳದ ಬಜಗೋಳಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ರಾಜ್ಯ ಸರಕಾರ ಕೆಲವೊಂದು ತಾಂತ್ರಿಕ ಕಾರಣಗಳನ್ನು ನೀಡಿ ಪಡಿತರ ಚೀಟಿ ನೀಡದಂತೆ ನಿರ್ದೇಶನ ನೀಡಿದೆ. ಇದರಿಂದಾಗಿ ಲಕ್ಷಾಂತರ ಜನ ಅನ್ನ ಭಾಗ್ಯ ಯೋಜನೆಯಿಂದ ವಂಚಿತರಾಗಿದ್ದಾರೆ. ತನ್ನ ಆರ್ಥಿಕ ನೀತಿಯ ವೈಫಲ್ಯವನ್ನು ಸರಿಪಡಿಸಲು ರಾಜ್ಯದ ಜನತೆಯ ಮೇಲೆ ಗದಾ ಪ್ರಹಾರ ಮಾಡುತ್ತಿರುವ ಸರಕಾರ, ಗ್ಯಾರಂಟಿಗಳನ್ನು ಕೊಡಲಾಗದೆ ಹೀಗೆ ತನ್ನ ಜನವಿರೋಧಿ ನೀತಿ ಸಂಕಲ್ಪವನ್ನು ಪರೋಕ್ಷವಾಗಿ ಈಡೇರಿಸುತ್ತಿದೆ. ಈ ನಿಟ್ಟಿನಲ್ಲಿ ನಾವು ಸರಕಾರದ ಜನ ವಿರೋಧಿ ನೀತಿ, ಜನರಿಗೆ ಮಾಡಿರುವ ಮೋಸವನ್ನು ಜನತೆಯ ಮುಂದಿಡಬೇಕೆಂದು ಸುನಿಲ್‌ ಕುಮಾರ್‌ ಹೇಳಿದರು.

ಮುಖ್ಯಮಂತ್ರಿ ಸ್ಥಾನದ ಘನತೆ ಕಾಪಾಡಿ ರಾಜ್ಯ ಸರಕಾರ ಭ್ರಷ್ಟಾಚಾರದಿಂದ ಕೂಡಿದೆ. ಸ್ವತಃ ಮುಖ್ಯಮಂತ್ರಿಗಳೇ ಮುಡಾ ಹಗರಣದಲ್ಲಿ ಸಿಲುಕಿದ್ದಾರೆ. ಮುಡಾದಿಂದ ಅಕ್ರಮವಾಗಿ ಪಡೆದಿರುವ 14 ಸೈಟುಗಳನ್ನು ವಾಪಸ್ ನೀಡುವ ಮೂಲಕ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡಿದ್ದಾರೆ.

ಇನ್ನೂ ಅಧಿಕಾರಕ್ಕೆ ಅಂಟಿಕೊಳ್ಳದೇ, ನೈತಿಕ ಹೊಣೆ ಹೊತ್ತಿಕೊಂಡು ತನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಕಾಪಾಡಿ ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಸಭೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಜಿಲ್ಲಾ ಕಾರ್ಯದರ್ಶಿ ಉದಯ್ ಕೋಟ್ಯಾನ್, ಕಾರ್ಕಳ ಮಂಡಲದ ಉಪಾಧ್ಯಕ್ಷ ಅನಂತಕೃಷ್ಣ ಶೆಣೈ, ಮರ್ಣೆ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ ಹಿರ್ಗಾನ ಉಪಸ್ಥಿತರಿದ್ದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು