ಸಿಇಟಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 8089 ವಿದ್ಯಾರ್ಥಿಗಳು ನೊಂದಣಿ : ಡಿಸಿ ವಿದ್ಯಾಕುಮಾರಿ

ಉಡುಪಿ : ವೈದ್ಯಕೀಯವನ್ನು ಹೊರತುಪಡಿಸಿ ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶವನ್ನು ಕಲ್ಪಿಸುವ ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆಗಳು (ಸಿಇಟಿ) ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 8089 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೊಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಸೋಮವಾರ ನಡೆದ 2025ನೇ ಸಾಲಿನ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಎಪ್ರಿಲ್ 16 ಮತ್ತು 17ರಂದು ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 8089 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಉಡುಪಿಯಲ್ಲಿ 12, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ 6 ಸೇರಿದಂತೆ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಸಮಸ್ಯೆ ಗೊಂದಲಗಳು ಉಂಟಾಗದಂತೆ ಎಚ್ಚರಿಕೆ‌ಯನ್ನು ವಹಿಸಬೇಕು ಎಂದವರು ಎಲ್ಲರಿಗೂ ಸೂಚನೆಗಳನ್ನು ನೀಡಿದರು.

ಸಿಇಟಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್‌ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರ ತಂಡಗಳು ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ನಿರ್ದೇಶನಗಳನ್ನು ನೀಡಿದರು.

Related posts

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕೋಟದಲ್ಲಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಮತ್ಸ್ಯಗಂಧ ರೈಲಿನಲ್ಲಿ ಲಕ್ಷಾಂತರ ಮೌಲ್ಯದ ವಜ್ರಾಭರಣ ಕಳವು – ದೂರು ದಾಖಲು