ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89 ಲಕ್ಷ ರೂ ವಂಚನೆ ಪ್ರಕರಣ – ಆರೋಪಿ ಬಂಧನ

ಉಡುಪಿ : ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ ಒಟ್ಟು ಏಳು ಲಕ್ಷ ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಉಡುಪಿಯ ಜ್ಯುವೆಲ್ಲರಿ ಅಂಗಡಿ ಮಾಲಕ ಕನ್ನಾರ್ ಸಂತೋಷ ಕುಮಾರ್(45) ಎಂಬವರಿಗೆ ಸೆಪ್ಟೆಂಬರ್ 11ರಂದು ಅಪರಿಚಿತರು ಕರೆ ಮಾಡಿ, ಅಕ್ರಮ ಜಾಹೀರಾತು, ಸಂದೇಶ ಕಳುಹಿಸುವುದಕ್ಕೆ ನಿಮ್ಮ ಮೇಲೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ನಿಮ್ಮ ಮೇಲೆ ಅರೆಸ್ಟ್ ವಾರಂಟ್ ಆಗಿರುವುದಾಗಿ ಬೆದರಿಸಿದ್ದರು.

ನಂತರ ಪೊಲೀಸ್‌ ಅಧಿಕಾರಿ ಸಮವಸ್ತ್ರದಲ್ಲಿ ವಾಟ್ಸಪ್ ವಿಡಿಯೋ ಕರೆ ಮಾಡಿ, ಮನಿ ಲಾಂಡ್ರಿಂಗ್ ಕೇಸ್‌ನಲ್ಲಿ ಭಾಗಿಯಾಗಿರುವುದಾಗಿ ತಿಳಿಸಿ ಆದಾಯದ ಮೂಲ ಪರಿಶೀಲನೆ ಮಾಡುವುದಾಗಿ ಹೇಳಿ, ವರ್ಚುವಲ್ ಅರೆಸ್ಟ್ ಮಾಡುವುದಾಗಿ ಬೆದರಿಸಿದ್ದರು. ಅದರಂತೆ ಸಂತೋಷ್ ಕುಮಾ‌ರ್‌ಗೆ ಬೆದರಿಸಿ ಅವರಿಂದ 89,00,000ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದರು. ಈ ಬಗ್ಗೆ ಸಂತೋಷ್ ಕುಮಾರ್ ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Related posts

ವಿಕಸಿತ ಭಾರತಕ್ಕೆ ಮುನ್ನುಡಿ, ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ ಬಜೆಟ್ – ಶ್ರೀನಿಧಿ ಹೆಗ್ಡೆ

“ಸಿದ್ದರಾಮಯ್ಯನವರು ನನಗೆ ಹೆಲ್ಪ್ ಮಾಡಬೇಕು” – ಇಂದು ಶರಣಾದ ನಕ್ಸಲ್ ಲಕ್ಷ್ಮೀ ಹೇಳಿಕೆ

ನಕ್ಸಲ್ ತೊಂಬಟ್ಟು ಲಕ್ಷ್ಮೀ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ