ರೈಲು ಪ್ರಯಾಣಿಕನ ಸೂಟ್‌ಕೇಸ್‌ನಲ್ಲಿದ್ದ 63 ಲಕ್ಷ ಮೌಲ್ಯದ 900 ಗ್ರಾಂ ಚಿನ್ನಾಭರಣ ಕಳ್ಳತನ

ಮಣಿಪಾಲ : ಅವಿನಾಶ್‌ ಎಂಬವರು ಮುಂಬೈಯಿಂದ ಕುಟುಂಬದವರೊಂದಿಗೆ ಉಡುಪಿಗೆ ರೈಲಿನಲ್ಲಿ ಬರುವಾಗ ಅವರ ಸೂಟ್‌ಕೇಸ್‌ನಲ್ಲಿ ಇಟ್ಟಿದ್ದ 63 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ.

15/11‌ರಂದು ಅವಿನಾಶ್ ಅವರು CST Mangalore Express No-12133 Coach NO:S3‌ರಲ್ಲಿ ಮುಂಬೈಯಿಂದ ಉಡುಪಿಯತ್ತ ಪ್ರಯಾಣಿಸುತ್ತಿದ್ದರು. ಅವರ ಒಡವೆ ಹಾಗೂ ಬಟ್ಟೆಗಳಿದ್ದ 4 ಸೂಟ್‌ಕೇಸ್‌ಗಳನ್ನು ಬೀಗ ಹಾಕದೇ ರೈಲಿನ ಸೀಟಿನ ಕೆಳಗೆ ಇಟ್ಟಿದ್ದರು. 16/11 ರಂದು ಅವಿನಾಶ್ ಅವರು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಇಳಿದು ಮನೆಗೆ ಹೋಗಿ ಬ್ಯಾಗನ್ನು ತೆರೆದು ನೋಡಿದಾಗ 2 ಬ್ಯಾಗಿನಲ್ಲಿ ಇಟ್ಟಿದ್ದ 63 ಲಕ್ಷ ಬೆಲೆಬಾಳುವ 900 ಗ್ರಾಂ ಚಿನ್ನದ ಒಡವೆಗಳು ಕಾಣೆಯಾಗಿರುವುದು ಕಂಡು ಬಂದಿದೆ.

ಒಡವೆಗಳನ್ನು ಪನ್‌‌ವೇಲ್‌ನಿಂದ ಕಂಕಾವಲಿ ರೈಲ್ವೆ ನಿಲ್ದಾಣದ ಮಧ್ಯೆ ಯಾರೋ ಕಳ್ಳರು ಕಳವು ಮಾಡಿರುವುದಾಗಿ ಅವರು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು