ಮಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 23ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರಧಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಮಂಗಳೂರಿನ ಉರ್ವಸ್ಟೋರ್‌ನಲ್ಲಿರುವ ತುಳು ಭವನದಲ್ಲಿ ಬಿಡುಗಡೆಗೊಳಿಸಿದರು.

2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ದತ್ತಿನಿಧಿ ಪ್ರಶಸ್ತಿ ಹಾಗೂ 2022 ಮತ್ತು 23ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರಧಾನ ಸಮಾರಂಭ ನವೆಂಬರ್ 19ರಂದು ಸಂಜೆ 4:30ಕ್ಕೆ ಮಂಗಳೂರಿನ ಉರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರು ಹಾಗೂ ಕಾರ್ಯಕ್ರಮದ ಸಂಚಾಲಕರಾದ ಸತೀಶ್ ಅಡಪ ಸಂಕಬೈಲ್, ಕೃಷ್ಣಪ್ಪ ಪೂಜಾರಿ ಕಿನ್ಯಾ, ರಾಜೇಶ್ ಕುಳಾಯಿ, ಗುರುರಾಜ್ ಭಟ್, ವಿನಯ್ ಕುಮಾರ್ ಶೆಟ್ಟಿ, ವಿಜಯ ಕುಮಾರ್ ಶೆಟ್ಟಿ, ಜಿ.ವಿ.ಎಸ್ ಉಳ್ಳಾಲ್, ಮೋಹನ್ ಕೊಪ್ಪಳ್ ಉಪಸ್ಥಿತರಿದ್ದರು.