ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದಿಂದ ನಡೆಯುತ್ತಿರುವ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಮಠಾಧೀಶ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ‘ಗೀತಾಮೃತಸಾರ’ ಮರುಮುದ್ರಿತ ಕೃತಿಯನ್ನು ಅನಾವರಣಗೊಳಿಸಿದರು.
ಬಳಿಕ ಆಶೀರ್ವಚನ ನೀಡಿದ ಶ್ರೀಪಾದರು, ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಜ್ಞಾನ ಪೀಪಾಸು, ಅಧ್ಯಯನ, ಆಯುರ್ವೇದದ ಬಗ್ಗೆ ಅವರು ಹೊಂದಿದ್ದ ಜ್ಞಾನದ ಬಗ್ಗೆ ಸ್ಮರಿಸಿದರು. ಈ ಸಂದರ್ಭದಲ್ಲಿ ಶ್ರೀ ಸುಜ್ಞಾನೇಂದ್ರತೀರ್ಥರ ಪೂರ್ವಾಶ್ರಮದ ಬಂಧು, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ.ವಿಜಯ ಬಲ್ಲಾಳ್ ಮತ್ತು ಅನೇಕ ವಿದ್ಯಾರ್ಥಿಗಳಿಗೆ ಗೀತಾಪಾಠ ನಡೆಸಿದ ಡಾ. ರಾಮಕೃಷ್ಣ ರಾಮಚಂದ್ರ ಸೂರಿ ಅವರಿಗೆ ಶ್ರೀ ಕೃಷ್ಣ ಗೀತಾನುಗ್ರಹ ಪ್ರಶಸ್ತಿ ನೀಡಲಾಯಿತು.
ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಪೂರ್ವಾಶ್ರಮದ ವಂಶಸ್ಥರಾದ ಹೆಜಮಾಡಿ ಸುಧೀಂದ್ರ ಆಚಾರ್ಯ ಉಪನ್ಯಾಸ ನೀಡಿದರು.
ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.