ಬಂಟ್ವಾಳ : ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯರಾತ್ರಿ ಬಂಟ್ವಾಳ ತಾಲೂಕಿನ ಬಡಕಬೈಲ್ ಎಂಬಲ್ಲಿ ಸಂಭವಿಸಿದೆ.
![](https://maaxmedia.in/wp-content/uploads/2025/02/Goni-Cheela-Godown-02.jpeg)
ಘಟನೆಯಿಂದಾಗಿ ಇಲ್ಲಿನ ನಿವಾಸಿ ಮುಹಮ್ಮದ್ ಯಾನೆ ಮೋನಾಕ ಎಂಬವರ ಗೋಣಿ ಚೀಲ ದಾಸ್ತಾನು ಇರಿಸುವ ಗೋದಾಮು ಸಂಪೂರ್ಣ ಸುಟ್ಟು ಹೋಗಿದ್ದು, ಪಕ್ಕದ ಹಮೀದ್ ಹಾಗೂ ಸರ್ಪುದ್ದೀನ್ ಎಂಬವರ ಮನೆಗೂ ಬೆಂಕಿ ತಗುಲಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ.
ತಡರಾತ್ರಿ ಘಟನೆ ಈ ಘಟನೆ ನಡೆದಿದ್ದು ಬೆಂಕಿ ನಂದಿಸಲು ಅಗ್ನಿ ಶಾಮಕದಳ ಹಾಗೂ ಸಾರ್ವಜನಿಕರು ಹರಸಾಹಸ ಪಡಬೇಕಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ನೀಡಿದ್ದಾರೆ.