ಮಲ್ಪೆ : ಉಡುಪಿಯ ಮಲ್ಪೆಯ ಸೈಂಟ್ ಮೇರಿಸ್ ದ್ವೀಪದ ಪರಿಸರದಲ್ಲಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶೀ ಬೋಟನ್ನು ಕೋಸ್ಟ್‌ಗಾರ್ಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಮೀನುಗಾರಿಕಾ ಬೋಟು ಓಮನ್ ದೇಶಕ್ಕೆ ಸೇರಿದ್ದಾಗಿದೆ. ಇದರಲ್ಲಿದ್ದ ತಮಿಳುನಾಡು ಮೂಲದ 3 ಜನರನ್ನು ವಶಕ್ಕೆ ಪಡೆಯಲಾಗಿದೆ. ಸೈಂಟ್ ಮೇರೀಸ್ ದ್ವೀಪದ ಬಳಿ ಈ ಬೋಟನ್ನು ಗಮನಿಸಿದ ಸ್ಥಳೀಯ ಮೀನುಗಾರರು ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಕಾರ್ಯಾಚಾರಣೆ ನಡೆಸಿ ವಶಕ್ಕೆ ಪಡೆದರು. ಸದ್ಯ ಬಂಧಿತ ತಮಿಳುನಾಡು ಮೂಲದ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೋಸ್ಟ್‌ಗಾರ್ಡ್ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
