ಉಡುಪಿ : ನಗರದ ಸಿಟಿ ಬಸ್ ತಂಗುದಾಣದ ಬಳಿ ಜಗಳ ಮಾಡಿಕೊಂಡು ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಪುನೀತ್ ಕುಮಾರ್ ಅವರು ರೌಂಡ್ಸ್ ಕರ್ತವ್ಯಕ್ಕೆoದು ಉಡುಪಿ ಸಿಟಿ ಬಸ್ ನಿಲ್ದಾಣದ ಕಡೆಗೆ ಬಂದಾಗ ನಾಲ್ಕು ಜನರು ಪರಸ್ಪರ ತಮ್ಮೊಳಗೆ ಜಗಳವಾಡುತ್ತಾ ಅವಾಚ್ಯ ಶಬ್ದಗಳಿಂದ ಬೈದಾಡುತ್ತಾ ಪರಸ್ಪರ ಕೈ ಕೈ ಮಿಲಾಯಿಸಿ ಸಾರ್ವಜನಿಕರಿಗೆ ತೊಂದರೆ ಆಗುವ ರೀತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಭಯದ ಮತ್ತು ಪ್ರಕ್ಷುಬ್ದ ವಾತಾವರಣ ಉಂಟುಮಾಡುತ್ತಿದ್ದರು.
ಈ ಸಂಬಂಧ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.