ಮಲ್ಪೆ : ದಲಿತ ಚಿಂತಕ ಹಾಗೂ ಹೋರಾಟಗಾರ ಜಯನ್ ಮಲ್ಪೆಗೆ ರಾಜ್ಯ ಸರಕಾರವು 2025ನೇ ಸಾಲಿನ ಡಾ|ಬಾಬು ಜಗಜೀವನ ರಾಂ ಪ್ರಶಸ್ತಿ ಘೋಷಿಸಿದೆ.
ನಾಲ್ಕು ದಶಕಗಳಿಗಿಂತ ಹೆಚ್ಚು ಕಾಲ ದಲಿತ ಚಳವಳಿಯಲ್ಲಿ ಭಾಗವಹಿಸಿದ್ದ ಜಯನ್ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ, ಜನಸಿರಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ. ಕನ್ನಡ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಬೆಂಗಳೂರಿನಲ್ಲಿ ಎಪ್ರಿಲ್ 5 ರಂದು ನಡೆಯುವ ಡಾ| ಬಾಬು ಜಗಜೀವನ ರಾಂ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು.