31
ಬೆಳ್ತಂಗಡಿ : ತಾಲೂಕಿನ ಸಂತೆಕಟ್ಟೆ ಎಂಬಲ್ಲಿ ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಬೆಳ್ತಂಗಡಿ ಪಟ್ಟಣದ ನಿವಾಸಿ, ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷೆ ವೀಣಾ ಅವರ ಪತಿ ವಿನೋದ್ (48) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.