ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಯುಕ್ತ ಸಿ.ಎಲ್. ಆನಂದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.

ಮಂಡ್ಯ ಮೂಲದ ಆನಂದ್ ಸಿ ಎಲ್ ಅವರು ಭಾರತೀಯ ಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕಾರ್ಕಳ ಎಪಿಎಂಸಿಯಲ್ಲಿ ಒಂಬತ್ತು ತಿಂಗಳ ಕಾಲ ಎಫ್‌ಡಿಎ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
K.A.S ಹಿರಿಯ ಶ್ರೇಣಿಯ ಶಿವಮೊಗ್ಗ ಜಿಲ್ಲೆಯ ತುಂಗಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನ ಅಧಿಕಾರಿ ರವಿಚಂದ್ರ ನಾಯಕ್‌ರವರನ್ನು ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ನೇಮಕಮಾಡಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಮಂಗಳೂರಿನ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಆಗಿ ಕಾರ್ಯನಿವಹಿಸುತ್ತಿದ್ದರು.