ಉಡುಪಿ : ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಖಾಸಗಿ ವ್ಯಕ್ತಿಗಳ ದೂರಿನ ಅನ್ವಯ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿತ್ತು.
ಈ ಸಂದರ್ಭದಲ್ಲಿ ಸಹಬಾಳ್ವೆ ಸಂಘಟನೆಯ ಸಂಚಾಲಕ ಪ್ರೊ. ಫಣಿರಾಜ್ ಮಾತನಾಡಿ, ” ಈ ಪ್ರತಿಭಟನೆಯು ಆಡಳಿತ ಸರ್ಕಾರದ ಪರವಾಗಿ ಅಲ್ಲ. ಬದಲಾಗಿ ಪ್ರಜಾಪ್ರಭುತ್ವವನ್ನು ಅಸ್ಥಿರವಾಗಿಸಲು ನಡೆಯುತ್ತಿರುವ ಹುನ್ನಾರದ ವಿರುದ್ಧವಾಗಿದೆ” ಎಂದರು.
“2020ರಲ್ಲಿ ನಡೆದಿದೆ ಎನ್ನಲಾದ ಮುಡಾ ಹಗರಣದ ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದಾರೆ. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯೇ ಆಗಿರಲಿಲ್ಲ. ಅಧಿಕಾರದಲ್ಲಿ ಇಲ್ಲದಾಗ ಹಗರಣ ನಡೆದಿದೆ ಎನ್ನುವುದನ್ನು ರಾಜ್ಯಪಾಲರು ನಂಬುವುದು ಹಾಸ್ಯಾಸ್ಪದ” ಎಂದು ಹೇಳಿದರು.
ಈ ಸಂದರ್ಭದಲ್ಲಿ ವೆರೋನಿಕಾ ಕರ್ನೆಲಿಯೋ, ಯಾಸೀನ್ ಮಲ್ಪೆ, ಸುಂದರ್ ಮಾಸ್ತರ್, ಪ್ರಸಾದ್ ಕಾಂಚನ್, ಪ್ರಶಾಂತ್ ಜತ್ತನ್,ಅಝೀಜ್ ಉದ್ಯಾವರ, ಅಶ್ಫಾಕ್ ಕಾರ್ಕಳ, ಇಸ್ಮಾಯಿಲ್ ಕಿದೆವರ್, ಜಾಬೀರ್ ಖತೀಬ್ ಮುಹಮ್ಮದ್ ಗೌಸ್ ಕಾರ್ಕಳ, ಹುಸೇನ್ ಕೋಡಿಬೆಂಗ್ರೆ ಮತ್ತು ಮಂಜುನಾಥ್ ಗಿಳಿಯಾರ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು