Sunday, November 24, 2024
Banner
Banner
Banner
Home » ತಂಗಿಯನ್ನು ಕಾಲೇಜಿಗೆ ಡ್ರಾಪ್ ಮಾಡುವಾಗ ಆಕ್ಸಿಡೆಂಟ್; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಮೃತ್ಯು.!

ತಂಗಿಯನ್ನು ಕಾಲೇಜಿಗೆ ಡ್ರಾಪ್ ಮಾಡುವಾಗ ಆಕ್ಸಿಡೆಂಟ್; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಮೃತ್ಯು.!

by NewsDesk

ಬಂಟ್ವಾಳ : ದ್ವಿಚಕ್ರಗಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ‌ಆ. 2ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ‌ಘಟನೆ ಇಂದು ನಡೆದಿದೆ.

ಬರಿಮಾರು ನಿವಾಸಿ ಸರ್ಪಾಝ್ (33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ (18) ಗಾಯಳು ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸರ್ಪಾಝ್ ಅವರು ತಂಗಿಯನ್ನು ದೇರಳಕಟ್ಟೆ ಕಾಲೇಜಿಗೆ ಸ್ಕೂಟರ್‌ನಲ್ಲಿ ಕರೆದುಕೊಂಡು ಹೋಗುವ ವೇಳೆ ಮೆಲ್ಕಾರ್‌ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಎದುರಿನಿಂದ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ‌ಇಮ್ತಿಯಾಜ್ ಎಂಬಾತ ಇವರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರ ಹಾಗೂ ಸಹಸವಾರಿಣಿ ಅಣ್ಣ ತಂಗಿ ಇಬ್ಬರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ‌ಗಾಯವಾಗಿತ್ತು. ಕೂಡಲೇ ಇಬ್ಬರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಗಂಭೀರವಾಗಿ ಏಟಾಗಿದ್ದ ಸರ್ಪಾಝ್ ಮಾತ್ರ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಪೋಲೀಸ್ ‌ಮೂಲಗಳು ತಿಳಿಸಿವೆ.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb