ಮಂಗಳೂರಿನಲ್ಲಿ ‌ 13 ವರ್ಷದ ಬಾಲಕಿಯ ಕೊಲೆ

ಮಂಗಳೂರು : ನಗರದ ಜೋಕಟ್ಟೆಗೆ ಚಿಕಿತ್ಸೆಗೆಂದು ಬೆಳಗಾವಿಯಿಂದ‌ ಬಂದಿದ್ದ 13 ವರ್ಷದ ಬಾಲಕಿಯನ್ನು ಕೊಲೆ ಮಾಡಿದ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ.

4 ದಿನಗಳ ಹಿಂದೆ ಬೆಳಗಾವಿ ಮೂಲದ ಹನುಮಂತ ಎಂಬವರು ಮನೆಗೆ ಅವರ ತಮ್ಮನ ಮಗಳು 13 ವರ್ಷದ ಬಾಲಕಿ ಕೈ ನೋವಿನ ಚಿಕಿತ್ಸೆ ಪಡೆಯಲು ಬೆಳಗಾವಿಯಿಂದ ಬಂದು ಉಳಿದುಕೊಂಡಿದ್ದಳು. ಇಂದು ಜೋಕಟ್ಟೆಯ ಬಾಡಿಗೆ ಮನೆಯಿಂದ ಮನೆಯಲ್ಲಿರುವವರೆಲ್ಲಾ ಕೆಲಸಕ್ಕೆ ಹೋದ ನಂತರ ಬಾಲಕಿಯ ಕೊಲೆ ನಡೆದಿದೆ.

ಇಂದು ಬೆಳಿಗ್ಗೆ 10.30 ಗಂಟೆಗೆ ಬಾಲಕಿಯ ತಾಯಿಯು ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಪೋನ್ ಕೊಡಲು ಹೇಳಿದ್ದರು. ಅದರಂತೆ ಪಕ್ಕದ ಮನೆಯವರು ಪೋನ್ ಕೊಡಲು ಬಾಲಕಿಯು ವಾಸವಿದ್ದ ಬಾಡಿಗೆ ಮನೆಗೆ ಬಂದಾಗ ಬಾಲಕಿಯ ಕೊಲೆಯಾಗಿರುವುದು ತಿಳಿದುಬಂದಿದೆ.

ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಯಾರೋ ಹತ್ಯೆ ಮಾಡಿದ ರೀತಿ ಕಂಡುಬಂದಿರುವುದನ್ನು ಪಕ್ಕದ ಮನೆಯವರು ತಾಯಿಗೆ ಪೋನಿನಲ್ಲಿ ತಿಳಿಸಿದ್ದಾರೆ. ಕೂಡಲೇ ಮೃತ ಬಾಲಕಿಯ ತಾಯಿಯು ಹನುಮಂತ ಅವರಿಗೆ ಪೋನ್ ಮೂಲಕ ಬಾಡಿಗೆ ಮನೆಗೆ ಹೋಗುವಂತೆ ತಿಳಿಸಿದ್ದು, ಹನುಮಂತನು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಣಂಬೂರು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ