ಗ್ಯಾಸ್ ಸಾಗಾಟದ ವಾಹನಕ್ಕೆ ಬೈಕ್ ಢಿಕ್ಕಿ, ಸವಾರ ಮೃತ್ಯು..!

ಗಂಗೊಳ್ಳಿ : ಬೈಕೊಂದು ಗ್ಯಾಸ್ ಸಾಗಾಟ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಗಂಗೊಳ್ಳಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66‌ರಲ್ಲಿ ಸೋಮವಾರ ನಡೆದಿದೆ.

ಮೃತ ದುರ್ದೈವಿಯನ್ನು ಮಂಗಳೂರು ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕೆಬಿ ಯುವರಾಜ್ ಬಲ್ಲಾಳ ಎಂಬವರ ಪುತ್ರ ರಂಜಿತ್ ಬಲ್ಲಾಳ್(59) ಎಂದು ಗುರುತಿಸಲಾಗಿದೆ.

ರಂಜಿತ್ ಬಲ್ಲಾಳ್ ಗೋವಾ ಕಡೆಯಿಂದ ಮಂಗಳೂರು ಕಡೆಗೆ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಬೈಕ್, ಗ್ಯಾಸ್ ವಾಹನಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದ ರಂಜಿತ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ ಬೈಕ್ ಸವಾರ ಬಲಿ

ಅಧಿವೇಶನದಲ್ಲಿ ಪ್ರತಿಧ್ವನಿಸಿದ ಇನ್ನಾ ಗ್ರಾಮದ 400 ಕೆ ವಿ ವಿದ್ಯುತ್ ಟವರ್ ನಿರ್ಮಾಣ ಸಮಸ್ಯೆ

‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ