ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಬಲಿ!

ಉಡುಪಿ : ಕೆಟ್ಟುನಿಂತಿದ್ದ ಟ್ಯಾಂಕರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ಭಾನುವಾರ ಸಂಜೆ ಪರ್ಕಳ ಎಸ್‌ಬಿಐ ಬ್ಯಾಂಕ್ ಬಳಿ ಸಂಭವಿಸಿದೆ.

ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್ ಸಾಗರ್(22) ಎಂದು ಗುರುತಿಸಲಾಗಿದೆ.

ಟೈಯರ್ ಪಂಚರ್ ಆಗಿ ರಸ್ತೆಯಲ್ಲಿ ನಿಂತಿದ್ದ ನೀರಿನ ಟ್ಯಾಂಕರ್‌ಗೆ ಬೈಕ್ ಸವಾರ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ