ಮನೆಯ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಮಂಗಳೂರು : ತಡರಾತ್ರಿ‌ ಸುರಿದ ಗಾಳಿ‌ ಮಳೆಗೆ ತಡೆಗೋಡೆ ಮನೆಯ ಮೇಲೆ‌ಯೇ ಕುಸಿದು ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಜೋಕಟ್ಟೆ ಬಳಿ ನಡೆದಿದೆ.

ಮುಲ್ಕಿ ಕೊಲ್ನಾಡು‌ ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್(17) ಮೃತಪಟ್ಟ ಬಾಲಕ.

ಶೈಲೇಶ್ ಜೋಕಟ್ಟೆಯಲ್ಲಿರುವ ಸಂಬಂಧಿಕರ ಮನೆಗೆ ಅಥಿತಿಯಾಗಿ ಬಂದಿದ್ದ. ರಾತ್ರಿ ಮನೆಮಂದಿ ಊಟ ಮಾಡಿ ಮಲಗಿದ್ದರು. ಆದರೆ ರಾತ್ರಿ ವೇಳೆ ಸುರಿದ ಭಾರೀ ಗಾಳಿ – ಮಳೆಗೆ ಪಕ್ಕದವರ ತಡೆಗೋಡೆ ಇವರ ಮನೆ ಮೇಲೆಯೇ ಕುಸಿದು ಬಿದ್ದಿದೆ. ಪರಿಣಾಮ ಮನೆ ಸಂಪೂರ್ಣ ಕುಸಿದಿದೆ. ಈ ವೇಳೆ ಮಣ್ಣಿನಡಿಯಲ್ಲಿ ಸಿಲುಕಿದ್ದ ಶೈಲೇಶ್ ಸ್ಥಳದಲ್ಲೇ‌ ಮೃತಪಟ್ಟಿದ್ದಾನೆ. ತಕ್ಷಣ ಅಗ್ನಿ ಶಾಮಕ‌ದಳ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹವನ್ನು ಹೊರ ತೆಗೆದಿದ್ದಾರೆ.

Related posts

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ