ಮನೆಯಂಗಳದಲ್ಲಿಯೇ ಕಾರಿನಡಿಗೆ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ : ಮನೆಯಂಗಳದಲ್ಲಿ ಕಾರು ಹೊರತೆಗೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ನಾಲ್ಕನೇ ತರಗತಿಯ ವಿದ್ಯಾರ್ಥಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ನವಾಫ್ ಇಸ್ಮಾಯಿಲ್ (10) ಮೃತ ಬಾಲಕ.

ಮನೆಯ ಅಂಗಳದಲ್ಲಿ ಕಾರನ್ನು ತೆಗೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಬಾಲಕ ಕಾರಿನಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣ ಆತನನ್ನು ಆಸ್ಪತ್ರೆಗೆ ಕೊಂಡೊಯ್ದರಾದರೂ ಅಷ್ಟರಲ್ಲಿ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ