ಬಸ್‌ ಹಿಂಬದಿಯಿಂದ ಕಾರು ಡಿಕ್ಕಿ-ಮಹಿಳೆಗೆ ಗಂಭೀರ ಗಾಯ

ಪಡುಬಿದ್ರಿ : ಕಾರೊಂದು ಬಸ್‌ ಹಿಂಬದಿಗೆ ಡಿಕ್ಕಿಯಾಗಿ ಪುಷ್ಪಲತಾ ಆಚಾರ್ಯ (56) ಎಂಬ ಮಹಿಳೆ ತೀವ್ರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.

ಮಂಗಳೂರು ಕಡೆಯಿಂದ ಉಡುಪಿಯತ್ತ ಹೋಗುತ್ತಿದ್ದ ತಡೆರಹಿತ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಠಾತ್ತನೇ ಯಾವುದೇ ಮುನ್ಸೂಚನೆ ಇಲ್ಲದೇ ನಿಲ್ಲಿಸಿದ ಪರಿಣಾಮವಾಗಿ ಅದರ ಹಿಂದಿ‌ನಿಂದ ಹೆದ್ದಾರಿಯಲ್ಲೇ ಬಂದಿದ್ದ ಕಾರೊಂದು ಬಸ್‌ ಹಿಂಬದಿಗೆ ಡಿಕ್ಕಿಯಾಗಿದೆ.

ಇದೇ ಕಾರಲ್ಲಿ ಚಾಲಕನ ಬದಿಯಲ್ಲೇ ಕುಳಿತಿದ್ದ ಪುಷ್ಪಲತಾ ಅವರ ಕಾಲುಗಳಿಗೆ, ಕೈಗೆ ಹಾಗೂ ಮೂಗಿಗೆ ಗಂಭೀರ ಗಾಯಗಳಾಗಿದ್ದು ಪಡುಬಿದ್ರಿ‌ಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ