ಫೇಸ್‌ಬುಕ್‌ನಲ್ಲಿ ಕೋಮುಭಾವನೆ ಕೆರಳಿಸುವ ಪೋಸ್ಟ್; ಆರೋಪಿ ಅರೆಸ್ಟ್…!

ಬಂಟ್ವಾಳ : ಫೇಸ್‌ಬುಕ್ ಖಾತೆಯಲ್ಲಿ ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್ ಮಾಡಿರುವ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ.

ಅರಳ ಗ್ರಾಮದ ನವಗ್ರಾಮ ಸೈಟ್ ನಿವಾಸಿ ಜಯ ಪೂಜಾರಿ ಬಂಧಿತ ಆರೋಪಿ. ಈತ ತನ್ನ ಫೇಸ್‌‌ಬುಕ್ ಖಾತೆಯಲ್ಲಿ ಧರ್ಮಗಳ ಮಧ್ಯೆ ಕೋಮುಭಾವನೆ ಕೆರಳುವ ರೀತಿಯಲ್ಲಿ, ಧರ್ಮವೊಂದನ್ನು ತೇಜೋವಧೆ ಮಾಡಿದ್ದಲ್ಲದೇ ಮಹಿಳೆಯರ ಮಾನಕ್ಕೆ ಕುಂದುಂಟಾಗುವ ಅವಹೇಳನಾಕಾರಿ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ.

ಈ ಬರಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿಯ ವಿರುದ್ದ ಸುಮೋಟೋ ಕೇಸ್ ದಾಖಲಿಸಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೋಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಈತನಿಗೆ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

Related posts

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಸಾವಿರಾರು ರೂ. ಚಾಕಲೇಟ್ ಕದ್ದೊಯ್ದ ಚಾಕಲೇಟ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ದಾಖಲು!

ಕ್ರೈಸ್ತ ವಿದ್ಯಾರ್ಥಿನಿಯ ಆಪಹರಣ ಹಾಗೂ ಲವ್ ಜಿಹಾದ್ ಪ್ರಕರಣ – ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಆಕ್ರೋಶ