ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ಕೋಟ ಹೆಸರಿನ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ

ಉಡುಪಿ : ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಅವರ ಫೋಟೋವನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಜಾಲತಾಣ ಇನ್ಸ್ಟಗ್ರಾಮ್‌ನಲ್ಲಿ ನಕಲಿ ಖಾತೆ ತೆರೆದಿದ್ದು, ಈ ಮೂಲಕ ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದರು ಎಂದು ದೂರಲಾಗಿದೆ.

ದುರುದ್ದೇಶಪೂರ್ವಕವಾಗಿ ಅಕ್ರಮ ಹಣವನ್ನು ಸಂಪಾದಿಸುವ ಹಾಗೂ ಹೆಸರನ್ನು ಕೆಡಿಸುವ ಉದ್ದೇಶದಿಂದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಸದರ ವಕೀಲ ಶ್ಯಾಮಸುಂದರ ನಾಯರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ