ಟೈಮಿಂಗ್‌ ವಿಚಾರದಲ್ಲಿ ಗಲಾಟೆ; ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌…!

ಉಡುಪಿ : ಮಣಿಪಾಲದ ಟೈಗರ್‌ ಸರ್ಕಲ್‌ ಖಾಸಗಿ ಬಸ್‌ ನಿಲ್ದಾಣದ ಬಳಿ ಟೈಮಿಂಗ್‌ ವಿಚಾರಕ್ಕೆ ಗಲಾಟೆ ನಡೆದು ಕಂಡಕ್ಟರ್ ಹಾಗೂ ಡ್ರೈವರ್ ಹೊಡೆದಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಎ.2ರಂದು ಸಂಜೆ 4:30 ಗಂಟೆ ಸುಮಾರಿಗೆ ಮಣಿಪಾಲದ ಟೈಗರ್‌ ಸರ್ಕಲ್‌ ಬಳಿ ಇರುವ ಖಾಸಗಿ ಬಸ್‌ ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವ ಟೈಮಿಂಗ್‌ ವಿಚಾರದಲ್ಲಿ ಆನಂದ್‌ ಬಸ್‌‌ನ ಕಂಡಕ್ಟರ್‌ ವಿಜಯ ಕುಮಾರ್‌ ಹಾಗೂ ಮಂಜುನಾಥ ಬಸ್ಸಿನ ಚಾಲಕ ಮೊಹಮ್ಮದ್‌ ಆಲ್ಪಾಜ್‌ ನಡುವೆ ಗಲಾಟೆ ನಡೆದಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ