ಹುತಾತ್ಮ ಸೈನಿಕನಿಗೆ ಅಂತಿಮ ನಮನ

ಕುಂದಾಪುರ : ಜಮ್ಮು-ಕಾಶ್ಮೀರದಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ತಾಲೂಕಿನ ಬೀಜಾಡಿಯ ಯೋಧ ಅನೂಪ್ ಪೂಜಾರಿ ಅವರ ಅಂತ್ಯಕ್ರಿಯೆ ಇಂದು ಬೀಜಾಡಿಯ ಕಡಲ ತೀರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಸಾವಿರಾರು ಜನರು ಹಾಜರಿದ್ದ ಈ ಕಾರ್ಯಕ್ರಮದಲ್ಲಿ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಾಯಿತು. ಪತ್ನಿ ಮಂಜುಶ್ರಿ ಅವರಿಗೆ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸುವ ಮೂಲಕ ಅವರ ಶೌರ್ಯವನ್ನು ಗೌರವಿಸಲಾಯಿತು.

ಅಂತ್ಯಕ್ರಿಯೆಯ ವೇಳೆ ‘ಭಾರತ್ ಮಾತಾ ಕಿ ಜೈ’ ಘೋಷಣೆ ಮುಗಿಲು ಮುಟ್ಟಿತು. ತಮ್ಮ ಪ್ರೀತಿಯ ಯೋಧನನ್ನು ಕಳೆದುಕೊಂಡ ಆಘಾತದಲ್ಲಿ ಕುಟುಂಬಸ್ಥರು ಮತ್ತು ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತು.

ಈ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ ಗಂಟಿಹೊಳೆ ಮತ್ತು ಸರಕಾರಿ ಅಧಿಕಾರಿಗಳು ಭಾಗಿಯಾದರು.

Related posts

ರೈಲ್ವೆ ನಿಲ್ದಾಣದಿಂದಲೇ ಬೈಕ್ ಕದ್ದ ಯುವಕರು; ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಸುರತ್ಕಲ್ – ಬಿ.ಸಿ.ರೋಡ್ ಪೋರ್ಟ್ ಸಂಪರ್ಕ ರಸ್ತೆ ನಿರ್ವಹಣೆ ಕಾಮಗಾರಿಗಳಿಗೆ ಸಂಸದ ಕ್ಯಾ. ಚೌಟ ಚಾಲನೆ