ಮಣಿಪಾಲ : ಮಣಿಪಾಲ ಫ್ಲ್ಯಾಟ್ ಒಂದರಲ್ಲಿ ಸಿಕ್ಕಿಹಾಕಿಕೊಂಡದ್ದ ಯುವತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಇಂದು ಸಂಭವಿಸಿದೆ. ಕೃತಿ ಗೋಯಲ್ (25) ರಕ್ಷಣೆಗೆ ಒಳಗಾದ ಯುವತಿ.
ಕೃತಿ ಗೋಯಲ್ ಮಣಿಪಾಲದ ಬಹುಮಹಡಿ ಅಪಾರ್ಟ್‌ಮೆಂಟ್ ಒಂದರಲ್ಲಿ ವಾಸವಾಗಿದ್ದು, ನಾಲ್ಕನೇ ಮಹಡಿಯಲ್ಲಿರುವ ತಮ್ಮ ಫ್ಲ್ಯಾಟ್‌ನಲ್ಲಿ ಮನೆಯ ಡೋರ್ ಲಾಕ್ ಆಗಿ ಹೊರ ಬರದೆ ಸಿಕ್ಕಿಹಾಕಿಕೊಂಡಿದ್ದರು. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಯುವತಿಯನ್ನು ಸುರಕ್ಷಿತವಾಗಿ ಹೊರ ಕರೆತಂದಿದ್ದಾರೆ.
