ಮೀನುಗಾರಿಕೆ ಮಾಡುವಾಗ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ

ಮಲ್ಪೆ : ಮಲ್ಪೆ ಅರಬ್ಬಿ ಸಮುದ್ರದಲ್ಲಿ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರರೊಬ್ಬರು ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಜನಾರ್ದನ (41) ನಾಪತ್ತೆಯಾದ ಮೀನುಗಾರ. ಇವರು ಲಂಬೋದರ ಎಂಬ ಆಳ ಸಮುದ್ರ ಮೀನುಗಾರಿಕೆ ಬೋಟಿನಲ್ಲಿ ಇತರರೊಂದಿಗೆ ಸೇರಿ ಬಲೆಯನ್ನು ಎಳೆಯುವಾಗ ಆಯತಪ್ಪಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ