ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಬೆಂಕಿಗಾಹುತಿ

ಮಂಗಳೂರು : ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್‌ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.

ಹುಸೈನ್ ಎಂಬವರ ಮಾಲಕತ್ವದ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗಿನ ಜಾವ 3ರಿಂದ 4 ಗಂಟೆಯ ಅವಧಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಈ ವೇಳೆ ಬೋಟ್‌ನಲ್ಲಿದ್ದ 10 ಮೀನುಗಾರರನ್ನು ಇನ್ನೊಂದು ಬೋಟ್‌ನಲ್ಲಿದ್ದವರು ರಕ್ಷಿಸಿದ್ದಾರೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

“ರವಿವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಧಕ್ಕೆಯಿಂದ ಸುಮಾರು 88 ನಾಟಿಕಲ್ ದೂರದಲ್ಲಿ ಬೋಟ್ ಮುಳುಗಿದೆ. ಜತೆಯಲ್ಲಿದ್ದ ಬೋಟ್‌ನವರು ಅವಘಡ ಗಮನಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ” ಎಂದು ಬೋಟ್ ಮಾಲಕರು ಮಾಹಿತಿ ನೀಡಿದ್ದಾರೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ