ಸ್ಕೂಟರ್‌ನಲ್ಲಿ ಸಂಚರಿಸಿ ಡಿಸಿಯಿಂದ ಹೆದ್ದಾರಿ ಪರಿಶೀಲನೆ

ಸ್ಕೂಟರ್‌ನಲ್ಲಿ ಸಂಚರಿಸಿ ಡಿಸಿಯಿಂದ ಹೆದ್ದಾರಿ ಪರಿಶೀಲನೆ

ಮಂಗಳೂರು : ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಬುಧವಾರ ಕಲ್ಲಡ್ಕ‌ಕ್ಕೆ ಭೇಟಿ ನೀಡಿ ಸ್ಕೂಟರ್‌ನಲ್ಲಿ ಸಂಚರಿಸಿ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ಸರಾಗವಾಗಿ ಹರಿಯಲು ಚರಂಡಿ ನಿರ್ಮಾಣ, ಪಾದಾಚಾರಿಗಳು ದಾಟಲು ನಾಲ್ಕು ಕಡೆ ಕಾಲುದಾರಿ ನಿರ್ಮಾಣ, ತ್ಯಾಜ್ಯಗಳನ್ನು ತೆಗೆಯುವುದು ಹಾಗೂ ಹೆದ್ದಾರಿ ಸಮತಟ್ಟುಗೊಳಿಸಲು ನಿರಂತರವಾಗಿ ವೆಟ್ ಮಿಕ್ಸ್ ಹಾಕಲು ಹೆದ್ದಾರಿ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು ಸ್ವತಃ ಸ್ಕೂಟರ್‌ನಲ್ಲಿ ಸಂಚರಿಸಿ ಹೆದ್ದಾರಿ ಸ್ಥಿತಿಗತಿ ಖುದ್ದು ವೀಕ್ಷಿಸಿರುವುದು ಗಮನ ಸೆಳೆಯಿತು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್