‘ಅಖಂಡ ಭಾರತ ಸಂಕಲ್ಪ ದಿನ’ದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ

ಉಡುಪಿ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪಂಜಿನ ಮೆರವಣಿಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು. ಬಳಿಕ ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ಕೋರ್ಟ್ ರಸ್ತೆ, ಹಳೆ ಡಯಾನ ಸರ್ಕಲ್, ಕೆಎಂ ಮಾರ್ಗವಾಗಿ ಸಾಗಿ ಬಂದು ಜಟ್ಕಾ ಸ್ಟ್ಯಾಂಡ್‌ನಲ್ಲಿ ಸಮಾಪನಗೊಂಡಿತು.

ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮಂಗಳೂರು ವಿಭಾಗ ಪ್ರಚಾರ ಪ್ರಮುಖ್ ಸೂರಜ್ ಮಂಗಳೂರು ದಿಕ್ಸೂಚಿ ಭಾಷಣ ಮಾಡಿದರು. ಉಡುಪಿ ದಂತ ವೈದ್ಯ ಡಾ. ವಿಜೇಂದ್ರ ವಸಂತ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ ನಿಟ್ಟೂರು, ಪ್ರಭಾಕರ ಪೂಜಾರಿ, ವಿಜಯ ಕೊಡವೂರು, ಹಿಂದೂ ಮುಖಂಡ ಮಹೇಶ್ ಬೈಲೂರು ಹಾಗೂ ನೂರಾರು ಜಾಗರಣ ವೇದಿಕೆಯ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ