ಹೆಮ್ಮಾಡಿ ಬಳಿ ಗಾಳಿ ಮಳೆಗೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ಜಖಂ; ಶಾಲಾ ಬಸ್ ಹಾದುಹೋದ ತಕ್ಷಣ ಘಟನೆ, ತಪ್ಪಿದ ಭಾರೀ ಅನಾಹುತ

ಕುಂದಾಪುರ : ಇಲ್ಲಿಗೆ ಸಮೀಪದ ಹೆಮ್ಮಾಡಿ ಸಂತೋಷ್ ನಗರ ರಸ್ತೆಯಲ್ಲಿ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ಜಖಂಗೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ನೆಲಕ್ಕುರುಳಿ ಹಲವು ವಿದ್ಯುತ್ ಕಂಬಗಳು ತುಂಡಾಗಿ ರಸ್ತೆಯಲ್ಲಿ ಬಿದಿದ್ದು ಸಂಚಾರ ಅಸ್ತವ್ಯಸ್ತಗೊಂಡಿತು. ಅಲ್ಲದೆ ಅದೃಷ್ಟವಶಾತ್ ಶಾಲೆ ಬಸ್ಸೊಂದು ರಸ್ತೆಯಲ್ಲಿ ಹಾದುಹೋದ ಒಂದೇ ನಿಮಿಷದಲ್ಲಿ ಮರಬಿದ್ದಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮೆಸ್ಕಾಂ ಲೈನ್ ಮ್ಯಾನ್‌ಗಳು ಬಂದಿದ್ದು ತೆರವು ಕಾರ್ಯಾಚರಣೆಯಲ್ಲಿ ಪಂಚಾಯತ್ ಸದಸ್ಯರು ಕೈಜೋಡಿಸಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ