ಅಸ್ಸಾಂ ಮೂಲದ ಕಾರ್ಮಿಕನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆ

ಉಪ್ಪಿನಂಗಡಿ : ಬಸ್‌ ನಿಲ್ದಾಣದ ಬಳಿಯ ಗ್ರಾಮ ಪಂಚಾಯತ್‌ ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕನೋರ್ವನ ತಲೆಗೆ ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ಕೆಲವು ಸಮಯಗಳ ಹಿಂದೆ ಸ್ಥಳೀಯ ಬಾರ್‌ ಆ್ಯಂಡ್‌ ರೆಸ್ಟೋರೆಂಟಿನಲ್ಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾದ ಹಾಗೂ ಇತ್ತೀಚೆಗೆ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕಾರ್ಮಿಕನಾಗಿ ತೊಡಗಿಕೊಂಡಿದ್ದ ಅಸ್ಸಾಂ ರಾಜ್ಯದ ಕರ್ಬಿ ಅಂಗ್ಲಾಂಗ್‌ ಜಿಲ್ಲೆಯ ಕ್ರಿಶ್ಚಿಯನ್‌ ಗ್ರಾಮದ ದೀಪಕ್‌ ಬೆಂಗರ (34) ಕೊಲೆಗೀಡಾದವ.

ಕಾರ್ಮಿಕರು ಬುಧವಾರ ಮುಂಜಾನೆ ಕಾಮಗಾರಿಯ ಸಲುವಾಗಿ ಕಟ್ಟಡವನ್ನು ಪ್ರವೇಶಿಸಿದಾಗ ಕಟ್ಟಡದ ಮೊದಲ ಮಹಡಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ತಲೆಯ ಭಾಗವನ್ನು ಕಲ್ಲಿನಂತಹ ಭಾರವಾದ ವಸ್ತುವಿನ ಸಹಾಯದಿಂದ ಜಜ್ಜಿ ಕೊಲೆಗೈದಂತೆ ಕಂಡುಬಂದಿದೆ.

ಘಟನ ಸ್ಥಳಕ್ಕೆ ದ.ಕ. ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ| ಯತೀಶ್‌ ಎನ್‌., ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ರಾಜೇಂದ್ರ, ವಿಧಿವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಂಚಾಯತ್‌ ಕಾರ್ಯದರ್ಶಿಯವರು ನೀಡಿದ ದೂರಿನ ಆಧಾರದಲ್ಲಿ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ