ಮನೆಯಂಗಳದಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೈಂದೂರು : ಚಿರತೆಯೊಂದು ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ ಬಳಿಕ ಹೊತ್ತೊಯ್ದ ಘಟನೆ ಬೈಂದೂರು ತಾಲೂಕಿನ ಕಟ್ ಬೆಲ್ತೂರು ಗ್ರಾಪಂ ವ್ಯಾಪ್ತಿಯ ದೇವಳಕುಂದ ಎಂಬಲ್ಲಿ ಸಂಭವಿಸಿದೆ. ಚಿರತೆ ನಾಯಿಯನ್ನು ಹೊತ್ತೊಯ್ಯುವ ಭಯಾನಕ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದೇವಳಕುಂದ ಗ್ರಾಮದ ಜಾಡಿಕಾಸ್ರ್‌ನ ಸುಧೀರ್ ಶೆಟ್ಟಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಹೊಂಚು ಹಾಕಿಕೊಂಡು ಬಂದ ಚಿರತೆ ಅಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ಏಕಾಏಕಿ ದಾಳಿ ನಡೆಸಿದೆ. ಗಾಢ ನಿದ್ದೆಯಲ್ಲಿದ್ದ ನಾಯಿಗೆ ಚಿರತೆಯ ಬಾಯಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಕ್ಷಣಾರ್ಧದಲ್ಲಿ ಚಿರತೆ ನಾಯಿಯನ್ನು ಹೊತ್ತುಕೊಂಡು ಕಾಡಿನೊಳಗೆ ಮರೆಯಾಗಿದೆ. ಚಿರತೆ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರಿಗೆ ಆತಂಕ ಶುರುವಾಗಿದೆ. ಬೋನಿಟ್ಟು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ