ನಾಯಿಯನ್ನು ಬೆನ್ನಟ್ಟಿ ಬಂದು ಬಾವಿಗೆ ಬಿದ್ದ ಚಿರತೆ : ಅರಣ್ಯ ಇಲಾಖೆಯಿಂದ ರಕ್ಷಣಾ ಕಾರ್ಯಾಚರಣೆ

ಪೆರ್ಡೂರು : ಉಡುಪಿ ಜಿಲ್ಲೆಯ ಪೆರ್ಡೂರು ಎಂಬಲ್ಲಿ ನಾಯಿಯನ್ನು ಬೆನ್ನಟ್ಟಿ ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಸಂಭವಿಸಿದೆ.

ಘಟನೆ ನಡೆಯುತ್ತಿದ್ದಂತೆ ಗಾಬರಿಗೊಂಡ ಮನೆಯವರು ಮತ್ತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಮೇಲೆತ್ತುವ ಕಾರ್ಯಾಚರಣೆ ನಡೆಸಿದರು. ಹಗ್ಗದ ಮೂಲಕ ಬೋನನ್ನು ಇಳಿಸಿದ ಸಿಬ್ಬಂದಿ ಸ್ಥಳೀಯರ ನೆರವಿನಿಂದ ಚಿರತೆಯನ್ನು ಸುರಕ್ಷಿತವಾಗಿ ಮೆರಲಕ್ಕೆತ್ತಿದರು. ಬಳಿಕ ಚಿರತೆಯನ್ನು ಅರಣ್ಯಕ್ಕೆ ಬಿಡಲಾಯಿತು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ